ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, ಸೋಮವಾರ ತಡರಾತ್ರಿ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪದ ಕೇಂದ್ರಬಿಂದು ಅಕ್ಷಾಂಶ 35.77 N ಮತ್ತು ರೇಖಾಂಶ 76.98 E ನಲ್ಲಿ 178 ಕಿಲೋಮೀಟರ್ ಆಳದಲ್ಲಿದೆ ಎಂದು NCS ಹೇಳಿದೆ.
ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸದ್ಯಕ್ಕೆ ಯಾವುದೇ ಹಾನಿ ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.