ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋನೇಷ್ಯಾದ ಟೊಬೆಲೊದ ಪಶ್ಚಿಮಕ್ಕೆ ಇಂದು 4.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಮತ್ತು ಭೂ ಭೌತಶಾಸ್ತ್ರ ಸಂಸ್ಥೆ ವರದಿ ಮಾಡಿದೆ.
ಭೂಕಂಪದ ಕೇಂದ್ರಬಿಂದು ಟೊಬೆಲೊ ಜಿಲ್ಲೆಯಿಂದ 85 ಕಿಲೋಮೀಟರ್ ದೂರದಲ್ಲಿ 123.9 ಕಿಲೋಮೀಟರ್ ಆಳದಲ್ಲಿದೆ ಎಂದು ಸಂಸ್ಥೆ ತಿಳಿಸಿದೆ.
ಸಾವುನೋವು ಅಥವಾ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ.