ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಇಂದು ಬೆಳಗಿನ ಜಾವ 1:54 ರ ಸುಮಾರಿಗೆ ಚುರಾಚಂದ್‌ಪುರ ಜಿಲ್ಲೆಯಲ್ಲಿ 5.2 ತೀವ್ರತೆಯ ಸರಣಿ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ನೊನಿ ಜಿಲ್ಲೆಯಲ್ಲಿ ಬೆಳಿಗ್ಗೆ 2:26 ಕ್ಕೆ 2.5 ತೀವ್ರತೆಯ ಎರಡನೇ ಭೂಕಂಪ ಸಂಭವಿಸಿದೆ. ಬೆಳಿಗ್ಗೆ 10:23 ಕ್ಕೆ ಚುರಾಚಂದ್‌ಪುರದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.