ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
NCS ಪ್ರಕಾರ, ಭೂಕಂಪವು ಬೆಳಿಗ್ಗೆ 6:52 ಕ್ಕೆ ಅಪ್ಪಳಿಸಿದೆ. ಭೂಕಂಪದ ಕೇಂದ್ರಬಿಂದುವು 19.38° ಉತ್ತರ ಅಕ್ಷಾಂಶ ಮತ್ತು 77.46° ಪೂರ್ವ ರೇಖಾಂಶದಲ್ಲಿ 5 ಕಿಮೀ ಆಳದಲ್ಲಿದೆ ಎಂದು ವರದಿಯಾಗಿದೆ.
ಇಲ್ಲಿಯವರೆಗೂ ಯಾವುದೇ ಹಾನಿ ಅಥವಾ ಸಾವು ನೋವುಗಳ ವರದಿ ಇನ್ನೂ ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.