ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ ಶನಿವಾರ ತಡರಾತ್ರಿ ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪದ ಕೇಂದ್ರಬಿಂದು ಅಕ್ಷಾಂಶ 27.41 N ಮತ್ತು ರೇಖಾಂಶ 75.06 E, 5 ಕಿಲೋಮೀಟರ್ ಆಳದಲ್ಲಿದೆ ಎಂದು NCS ಹೇಳಿದೆ.
“ರಾಜಸ್ಥಾನದ ಸಿಕರ್ನಲ್ಲಿ ಶನಿವಾರ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ” ಎಂದು ಎನ್ಸಿಎಸ್ ಭಾನುವಾರ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ.