ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಸ್ಸಾಂನ ಸೋನಿತ್ಪುರದಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 3.5 ಮತ್ತು 3.2 ರ ಎರಡು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಎನ್ಸಿಎಸ್ ಪ್ರಕಾರ, ಅಸ್ಸಾಂನ ಸೋನಿತ್ಪುರದಲ್ಲಿ ಸಂಜೆ 4: 49 ಕ್ಕೆ 3.5 ತೀವ್ರತೆಯ ಭೂಕಂಪ ಸಂಭವಿಸಿದೆ. ಸಂಜೆ 6: 27 ಕ್ಕೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಿದೆ.
ಇದಕ್ಕೂ ಮೊದಲು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪನವು ಅಸ್ಸಾಂನ ಸೋನಿತ್ಪುರದಲ್ಲಿ ಗುರುವಾರ ಸಂಭವಿಸಿದೆ ಎಂದು ಎನ್ಸಿಎಸ್ ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪನವು ಅಸ್ಸಾಂನ ಸೋನಿತ್ಪುರದಲ್ಲಿ ಬುಧವಾರ ಸಂಭವಿಸಿದ ನಂತರ ಇದು ಏಳನೇ ನಡುಕವಾಗಿದೆ.