ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿ- NCR ನಲ್ಲಿ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.
ಈ ಭೂಕಂಪನದ ಕೇಂದ್ರ ಬಿಂದು ಆಫ್ಘಾನಿಸ್ತಾನ ಎಂದು ಗುರುತಿಸಲಾಗಿದೆ. ಹೀಗಾಗಿ ಭಾರತ ಮಾತ್ರವಲ್ಲ ಪಾಕಿಸ್ತಾನದ ಕೆಲ ಪ್ರದೇಶಗಳಲ್ಲೂ ಭೂಕಂಪನವಾಗಿರುವ ಮಾಹಿತಿ ಲಭ್ಯವಾಗಿದೆ.
ಭಾರತದ ಘಾಜಿಯಾದಾಬಾದ್, ಫರಿದಾಬಾದ್, ಗುರುಗ್ರಾಂ ಸೇರಿದಂತೆ ದೆಹಲಿ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಪಾಕಿಸ್ತಾನದ ಲಾಹೋರ್, ಇಸ್ಲಾಮಾಬಾದ್ ಹಾಗೂ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಕೆಲ ನಗರಗಳಲ್ಲೂ ಭೂಕಂಪನ ಅನುಭವವಾಗಿದೆ.
ಆಫ್ಘಾನಿಸ್ತಾನದಲ್ಲಿ 220 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಎಂದು ಭಾರತೀಯ ಭೂಕಂಪ ಮಾಪನ ಕೇಂದ್ರ ವರದಿ ಮಾಡಿದೆ. 6.4 ರ ತೀವ್ರತೆಯ ಭೂಕಂಪನ ದಾಖಲಾಗಿದೆ. ದೆಹಲಿ ಹಾಗೂ ಪಾಕಿಸ್ತಾನದಲ್ಲಿ ಲಘು ಭೂಕಂಪನದ ಅನುಭವವಾಗಿದೆ.