ಮಣಿಪುರ, ಅಫ್ಗಾನಿಸ್ತಾನ, ತಜಕಿಸ್ತಾನದಲ್ಲಿ ಲಘು ಭೂಕಂಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಣಿಪುರ, ಅಫ್ಘಾನಿಸ್ತಾನ ಹಾಗೂ ತಜಿಕಿಸ್ತಾನದಲ್ಲಿ ಮಂಗಳವಾರ ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Seismology Center) ತಿಳಿಸಿದೆ.

ಮಣಿಪುರದ ನೋನಿ ಜಿಲ್ಲೆಯಲ್ಲಿ ಬೆಳಗ್ಗೆ 3 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಮಿಯಿಂದ 25 ಕೀ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ.

ತಜಿಕಿಸ್ತಾನದಲ್ಲೂ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.3ರಷ್ಟು ದಾಖಲಾಗಿದೆ.

ಇನ್ನು ಅಫ್ಘಾನಿಸ್ತಾನದಲ್ಲಿ ಇಂದು (ಮಂಗಳವಾರ) ಮತ್ತೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ನಿನ್ನೆ (ಫೆ.27) ಸಹ ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು,ಇದೀಗ 24 ಟೆಗಳಲ್ಲಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ.

ತೀವ್ರತೆಯ ಪ್ರಮಾಣ ಕಡಿಮೆ ಇರುವುದರಿಂದ ಇದುವರೆಗೂ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅಲ್ಲಿನ ಸರ್ಕಾರಗಳು ಮಾಹಿತಿ ನೀಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!