ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದಲ್ಲಿ ಸಂಭವಿಸಿರುವ ಭೂಕಂಪಕ್ಕೆ ಸಾವನ್ನಪ್ಪಿರುವವರ ಸಂಖ್ಯೆ 140ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೂಕಂಪದಿಂದಾಗಿ ನೇಪಾಳದಲ್ಲಿ ಈವರೆಗೆ 150ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ.
ರುಕುಮ್ ಪಶ್ಚಿಮದಲ್ಲಿ 35ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಜಾಜರ್ಕೋಟ್ ಜಿಲ್ಲೆಯಲ್ಲಿ 90ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ನೇಪಾಳದ ಅಧಿಕಾರಿಗಳು ದೃಢಪಡಿಸಿದ್ದಾರೆ.