Sunday, December 3, 2023

Latest Posts

ಪಂಜಾಬ್, ಕಾಶ್ಮೀರದಲ್ಲಿ ಕಂಪಿಸಿದ ಭೂಮಿ, ಸರಣಿ ಭೂಕಂಪಕ್ಕೆ ತತ್ತರಿಸಿದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಂಜಾಬ್ ರಾಜ್ಯದ ರೂಪ್ ನಗರಲ್ಲಿ ಬುಧವಾರ ತಡರಾತ್ರಿ 1.13ಕ್ಕೆ ಒಂದೇ ಸ್ಥಳದಲ್ಲಿ ಎರೆಡೆರೆಡು ಬಾರಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.2 ರಷ್ಟಿತ್ತು ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಪ್ರಸ್ತುತ ಯಾವುದೇ ಹಾನಿಯಾಗಿರುವ ಬಗ್ಗೆ ಮಾಹಿತಿಯಿಲ್ಲ.

ಅದೇ ರೀತಿ ಜಮ್ಮು ಮತ್ತು ಕಾಶ್ಮೀರದ ಕಿಶ್ತಾವರ್ ಪ್ರದೇಶದಲ್ಲಿ ಮಂಗಳವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಇಲ್ಲಿ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.5ರಷ್ಟು ದಾಖಲಾಗಿದೆ. ಉತ್ತರ ಪ್ರದೇಶದ ಅಯೋಧ್ಯೆ ನಗರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

ಕಳೆದ ನಾಲ್ಕು ದಿನಗಳಿಂದ ನೇಪಾಳ ಮತ್ತು ಉತ್ತರ ಭಾರತದ ಹಲವು ಭಾಗಗಳಲ್ಲಿ ಸರಣಿ ಭೂಕಂಪಗಳು ಸಂಭವಿಸುತ್ತಿದ್ದು, ಇದರಿಂದಾಗಿ ಸ್ಥಳೀಯರು ಜೀವ ಭಯದಲ್ಲಿ ಕಾಲ ಕಳೆಯುವ ಸ್ಥಿತಿ ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!