ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳವಾರ ರಾತ್ರಿ 11.36ಕ್ಕೆ ಬಿಕನೇರ್ ನಗರ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ್ದು, ನಿದ್ದೆ ಮಾಡುತ್ತಿದ್ದ ಜನ ಭಯಗೊಂಡು ರಸ್ತೆಗೆ ಬಂದಿದ್ದಾರೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3ರಷ್ಟಿತ್ತು. ಬಿಕಾನೇರ್ ಪ್ರದೇಶದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ.
ಉತ್ತರ ಭಾರತದಲ್ಲಿ ಪದೇ ಪದೇ ಭೂಕಂಪಗಳು ಸಂಭವಿಸುತ್ತಿರುವುದರಿಂದ ಈ ಭಾಗದ ಜನರು ತೀವ್ರ ಭಯದಲ್ಲಿದ್ದಾರೆ. ಈ ಭೂಕಂಪದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ರಾಜಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಆಗಾಗ್ಗೆ ಭೂಕಂಪಗಳು ಸಂಭವಿಸುತ್ತವೆ.