ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪದಿಂದ 1,411ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸುಮಾರು 3,124 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ತಡರಾತ್ರಿ ಭೂಕಂಪ ಸಂಭವಿಸಿತ್ತು. ತೀವ್ರ ಹಾನಿಗೊಳಗಾದ ಕುನಾರ್ ಪ್ರಾಂತ್ಯದಲ್ಲಿ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರದ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು, ಭಾರತವು ಡೇರೆಗಳು ಮತ್ತು ಆಹಾರ ಸಾಮಗ್ರಿಗಳನ್ನು ದೇಶಕ್ಕೆ ರವಾನಿಸಿದೆ ಎಂದು ಜೈಶಂಕರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದಿದ್ದಾರೆ.