ಛತ್ತೀಸ್‌ಗಢದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.8 ರಷ್ಟು ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಶುಕ್ರವಾರ (ಅಕ್ಟೋಬರ್ 14, 2022) ಬೆಳಿಗ್ಗೆ 5.28 ಕ್ಕೆ ಅಂಬಿಕಾಪುರ ಬಳಿ ಭೂಮಿ ಕಂಪಿಸಿದ್ದು, ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.8 ರಷ್ಟು ದಾಖಲಾಗಿದೆ.

ಭೂಕಂಪದ ಕೇಂದ್ರ ಬಿಂದು ಅಂಬಿಕಾಪುರದಿಂದ 65 ಕಿ.ಮೀ ದೂರದಲ್ಲಿದೆ ಎಂದು ಕೇಂದ್ರ ಹೇಳಿದೆ. ಭೂಮಿಯ ಒಳಭಾಗದಲ್ಲಿ 10 ಕಿಲೋಮೀಟರ್ ಆಳದಲ್ಲಿ ಚಲನೆಗಳು ಸಂಭವಿಸಿವೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಆಗಿರುವ ಹಾನಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!