ದೆಹಲಿ, ಹರಿಯಾಣದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿ ಮತ್ತು ಹರಿಯಾಣದಲ್ಲಿ ಮಧ್ಯರಾತ್ರಿ ಭೂಕಂಪ ಸಂಭವಿಸಿದೆ. ಗುರುಗಾಂ, ಹರಿಯಾಣದ ಶೆರಿಯಾ, ಝಜ್ಜರ್ ಮತ್ತು ದೆಹಲಿಯ ಹಲವು ಸ್ಥಳಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.8ರಷ್ಟು ದಾಖಲಾಗಿದೆ. ಭೂಕಂಪದಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ.

ಆದರೆ ಭೂಕಂಪದಿಂದ ಯಾವುದೇ ಪ್ರಾಣ ಹಾನಿಯಾಗದ ಕಾರಣ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ನೀಡಿದ ಮಾಹಿತಿಯ ಪ್ರಕಾರ, ಹರಿಯಾಣದ ಜಜ್ಜರ್ ವಾಯುವ್ಯ ಪ್ರದೇಶದಲ್ಲಿ ಭಾನುವಾರ (ಜನವರಿ 1, 2023) ಮಧ್ಯರಾತ್ರಿ 1.19 ಗಂಟೆಗೆ ಭೂಕಂಪ ಸಂಭವಿಸಿದೆ.

ಭೂಕಂಪದ ಕೇಂದ್ರಬಿಂದು 5 ಕಿ.ಮೀ ಆಳದಲ್ಲಿ ಪತ್ತೆಯಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.8ರಷ್ಟು ದಾಖಲಾಗಿದೆ. ಇದು ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಭೂಕಂಪಕ್ಕೆ ಕಾರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!