ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ-ಎನ್ಸಿಆರ್ ಪ್ರದೇಶಗಳಾದ್ಯಂತ ಮಂಗಳವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಫರಿದಾಬಾದ್ ಕೇಂದ್ರದಲ್ಲಿ ಬೆಳಗ್ಗೆ 6 ಗಂಟೆಗೆ 3.2 ತೀವ್ರತೆಯ ಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಆಳವು ಮೇಲ್ಮೈಯಿಂದ 5 ಕಿ.ಮೀ ಕೆಳಗೆ, ಅಕ್ಷಾಂಶದಲ್ಲಿ 28.29 ಡಿಗ್ರಿ ಉತ್ತರ ಮತ್ತು ರೇಖಾಂಶವು 72.21 ಡಿಗ್ರಿ ಪೂರ್ವದಲ್ಲಿದೆ ಎಂದು ಅದು ಹೇಳಿದೆ.