ಹೊಸದಿಗಂತ ಆನ್ಲೈನ್ ಡೆಸ್ಕ್:
ಗುಜರಾತ್ನ ಕಛ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಇದರಿಂದಾಗಿ ಯಾವುದೇ ಸಾವು,ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಭೂಕಂಪ ಶಾಸ್ತ್ರ ಸಂಶೋಧನಾ ಸಂಸ್ಥೆ ವೆಬ್ಸೈಟ್ನಲ್ಲಿ ಮಾಹಿತಿ ನೀಡಲಾಗಿದೆ. ಕಛ್ ಜಿಲ್ಲೆಯ ದುಧಾಯಿಯಿಂದ 12 ಕಿ.ಮೀ. ಪೂರ್ವ ಈಶಾನ್ಯಕ್ಕೆ 13 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದೆ. ಕಛ್ ಅತ್ಯಂತ ಹೆಚ್ಚು ಅಪಾಯವಿರುವ ಭೂಕಂಪ ವಲಯದಲ್ಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.