ಇಂಡೋನೇಷ್ಯಾದಲ್ಲಿ ಭೂ ಕಂಪನ: 6.4 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರದೇಶದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜಕಾರ್ತಾದಲ್ಲೂ ಕಂಪನದ ಅನುಭವವಾಗಿದೆ.

ಇಂಡೋನೇಷ್ಯಾದಲ್ಲಿ ಭೂಕಂಪವು 118 ಕಿಮೀ (73 ಮೈಲುಗಳು) ಆಳದಲ್ಲಿದೆ ಎಂದು ದೇಶದ ಜಿಯೋಫಿಸಿಕ್ಸ್ ಏಜೆನ್ಸಿ ಬಿಎಂಕೆಜಿ ತಿಳಿಸಿದೆ. ಆದರೆ ಪಶ್ಚಿಮ ಜಾವಾ ಪ್ರದೇಶದಲ್ಲಿ ಸಂಭವಿಸಿದ ಭೂಕಂಪವು ಸುನಾಮಿ ಸಾಧ್ಯತೆ ಇಲ್ಲ ಎಂದು ಸಂಸ್ಥೆ ಹೇಳಿದೆ.

ಭೂಕಂಪದ ಕೇಂದ್ರದಿಂದ ಸುಮಾರು 50 ಕಿಮೀ (30 ಮೈಲುಗಳು) ದೂರದಲ್ಲಿರುವ ಗರುತ್‌ನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ತಿಂಗಳು ಪಶ್ಚಿಮ ಜಾವಾದ ಸಿಯಾಂಜೂರ್‌ನಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಪರಿಣಾಮ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!