Tuesday, May 30, 2023

Latest Posts

ಕಾಬೂಲ್‌ನಲ್ಲಿ ಭೂಕಂಪ: ರಿಕ್ಟರ್‌ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಭೂಮಿ ಕಂಪಿಸಿದೆ. ಕಾಬೂಲ್‌ನಿಂದ ಪೂರ್ವಕ್ಕೆ 85 ಕಿಲೋಮೀಟರ್ ದೂರದಲ್ಲಿ ಬುಧವಾರ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. 10 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿರುವುದಾಗಿ NCS ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ತಿಳಿಸಿದೆ.

ಆಸ್ತಿ-ಪಾಸ್ತಿ ಹಾನಿ ಯಾವುದೇ ಪ್ರಯಾಣಾಯವಾಗಿರುವುದರ ಬಗ್ಗೆ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಸೋಮವಾರ ಮುಂಜಾನೆ, ರಿಕ್ಟರ್ ಮಾಪಕದಲ್ಲಿ 4.2 ರ ತೀವ್ರತೆಯ ಭೂಕಂಪವು ಅಫ್ಘಾನಿಸ್ತಾನದ ತಖರ್ ಪ್ರಾಂತ್ಯದ ಫರ್ಖರ್ ಜಿಲ್ಲೆಯ ದಕ್ಷಿಣಕ್ಕೆ 25 ಕಿಲೋಮೀಟರ್ ದೂರದಲ್ಲಿ ಅಪ್ಪಳಿಸಿತು ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ವರದಿ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!