ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಲಡಾಖ್ ಪ್ರದೇಶದ ಲೇಹ್ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಭೂಕಂಪ ಸಂಭವಿಸಿದೆ. ಲಡಾಖ್ನ ಲೇಹ್ ಜಿಲ್ಲೆಯ ಈಶಾನ್ಯಕ್ಕೆ 295 ಕಿಮೀ ದೂರದಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.1 ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಭಾನುವಾರ ಮುಂಜಾನೆ 2:16 ಕ್ಕೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಡಾಖ್ ಭೂಕಂಪವನ್ನು ದೇಶದಲ್ಲಿ ಭೂಕಂಪದ ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ಭಾರತ ಸರ್ಕಾರದ ನೋಡಲ್ ಸಂಸ್ಥೆ ಖಚಿತಪಡಿಸಿದೆ.
ಈ ಭೂಕಂಪದಿಂದ ಮನೆಗಳಲ್ಲಿ ಮಲಗಿದ್ದವರು ಎದ್ದು ಹೊರಗೆ ಓಡಿ ಬಂದಿದ್ದಾರೆ. ಭೂಕಂಪದಿಂದಾಗಿ ಲೇಹ್ ಲಡಾಖ್ ಪ್ರದೇಶದಲ್ಲಿ ಪ್ರಯಾಣಿಸುವ ಪ್ರವಾಸಿಗರು ಭಯಭೀತರಾಗಿದ್ದಾರೆ.