ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಭೂಕಂಪನ: ತುರ್ತು ಪರಿಸ್ಥಿತಿ ಘೋಷಿಸಿದ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಥೈಲ್ಯಾಂಡ್ ಮತ್ತು ನೆರೆಯ ಮ್ಯಾನ್ಮಾರ್‌ನಲ್ಲಿ ಭೂಕಂಪನ ಸಂಭವಿಸಿದೆ. ಇದರಿಂದಾಗಿ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ಬಹುಮಹಡಿ ಕಟ್ಟಡ ಕುಸಿದಿದೆ.
ಪ್ರಬಲ ಭೂಕಂಪದಲ್ಲಿ ಕನಿಷ್ಠ 3 ಸಾವು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಥಾಯ್ಲೆಂಡ್ ನವ್ವಿನಲ್ಲಿ ರಿಕ್ಟರ್‌ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ.ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಕಂಪನ ಸಂಭವಿಸಿದೆ.

ಪರಿಣಾಮ ಬ್ಯಾಂಕಾಕ್ ನಲ್ಲಿ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದಿದೆ. ಇಲ್ಲಿ ಕನಿಷ್ಠ 3 ಮಂದಿ ಸಾವಿಗೀಡಾಗಿ 90 ಮಂದಿ ನಾಪತ್ತೆಯಾಗಿದ್ದಾರೆ. ಅಂತೆಯೇ ಇಲ್ಲಿಯವರೆಗೆ ಏಳು ಜನರನ್ನು ರಕ್ಷಿಸಲಾಗಿದೆ ಎಂದು ಹೇಳಲಾಗಿದೆ.

ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಕಟ್ಟಡವು ಕುಸಿದಿದ್ದು ಅದರಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತುರ್ತು ಪರಿಸ್ಥಿತಿ ಘೋಷಣೆ
ಇನ್ನು ಭೂಕಂಪದ ಪರಿಣಾಮವಾಗಿ ಥಾಯ್ ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರಾ ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಬಾಂಗ್ಲಾದೇಶದ ಢಾಕಾ ಮತ್ತು ಚಟ್ಟೋಗ್ರಾಮ ಸೇರಿದಂತೆ ವಿವಿಧ ಭಾಗಗಳಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ ತೀವ್ರತೆ ಪ್ರಮಾಣ 7.3ರಷ್ಟು ದಾಖಲಾಗಿದೆ.ಬಾಂಗ್ಲಾದಲ್ಲಿ ಸಾವು– ನೋವಿನ ಬಗ್ಗೆ ವರದಿಯಾಗಿಲ್ಲ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!