Sunday, December 10, 2023

Latest Posts

BIG NEWS | ತಿಂಗಳಲ್ಲಿ 3ನೇ ಬಾರಿ ನೇಪಾಳದಲ್ಲಿ ಭೂಕಂಪ: 128 ಸಾವು, ದೆಹಲಿಯಲ್ಲೂ ಕಂಪನದ ಅನುಭವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 128 ಮಂದಿ ಮೃತಪಟ್ಟಿದ್ದಾರೆ.
ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದ್ದು, ಉತ್ತರ ಭಾರತದಲ್ಲಿಯೂ ಕಂಪನದ ಅನುಭವ ಆಗಿದೆ.

ನೇಪಾಳದಲ್ಲಿ 18 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರಬಿಂದುವಿದ್ದು, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿಯೂ ಜನರು ಬಲವಾದ ಕಂಪನವನ್ನು ಅನಿಭವಿಸಿದ್ದಾರೆ.

ಪ್ರಬಲವಾದ ಭೂಕಂಪಕ್ಕೆ ನೇಪಾಳದ ಜಜರ್ಕೋಟ್‌ನ ರಾಮಿದಂಡಾದಲ್ಲಿ 128 ಮಂದಿ ಮೃತಪಟ್ಟಿದ್ದಾರೆ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯೂ ಇದೆ. ಮಧ್ಯರಾತ್ರಿ 11:47 ಕ್ಕೆ ಭೂಕಂಪನ ಸಂಭವಿಸಿದ್ದು, ಹೆಚ್ಚಿನ ಜನರು ಸುಖನಿದ್ದೆಯಲ್ಲಿದ್ದರು ಎನ್ನಲಾಗಿದೆ.

ದೆಹಲಿಯಲ್ಲಿಯೂ ಭೂಕಂಪನದ ಅನುಭವವಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ತೀವ್ರ ಸಂತಾಪ ಸೂಚಿಸಿದ್ದು, ತಕ್ಷಣದ ರಕ್ಷಣೆ ಹಾಗೂ ಪರಿಹಾರಕ್ಕಾಗಿ ಭದ್ರತಾ ಏಜೆನ್ಸಿಗಳನ್ನು ನಿಯೋಜನೆ ಮಾಡಿದ್ದೇವೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ನೇಪಾಳದಲ್ಲಿ ಒಂದು ತಿಂಗಳ ಅವಧಿಯಲ್ಲಿ ಮೂರನೇ ಬಾರಿ ಭೂಕಂಪ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!