ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಯುದ್ಧದ ಭೀತಿ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಪಾಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪನವಾಗಿದೆ.
ಸಂಜೆ ನಾಲ್ಕು ಗಂಟೆಗೆ ವೇಳೆಗೆ ಪಾಕಿಸ್ತಾನದ ಹಲೆವೆಡೆ ಭೂಮಿ ಕಂಪನಿಸಿದ ಅನುಭವವಾಗಿದೆ. ಹೀಗಾಗಿ ಹಲವರು ಮನೆ, ಕಟ್ಟಡಗಳಿಂದ ಹೊರಗೆ ಓಡಿ ಬಂದಿದ್ದಾರೆ.
ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆಯ ಭೂಕಂಪನ ದಾಖಲಾಗಿದೆ. ಉತ್ತರ ಪಾಕಿಸ್ತಾನ ಭಾಗದಲ್ಲಿ ಭೂಕಂಪನ ಕೇಂದ್ರ ಬಿಂದು ದಾಖಲಾಗಿದೆ.ಸುಮಾರು 10 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಿಕ್ಟರ್ ಮಾಪಕದಲ್ಲಿ ದಾಖಾಗಿದೆ. ಸದ್ಯದ ಮಾಹಿತಿ ಪ್ರಕಾರ ಯಾವುದೇ ಸಾವು ನೋವು ಸಂಭವಿಸಿಲ್ಲ.
ಕಳೆದ ತಿಂಗಳು ಪಾಕಿಸ್ತಾನದಲ್ಲಿ ಭೂಕಂಪನ ಸಂಭವಿಸಿತ್ತು. ಎಪ್ರಿಲ್ 12ರಂದು ಪಾಕಿಸ್ತಾನದಲ್ಲಿ 5.8ರ ತೀವ್ರತೆಯ ಭೂಕಂಪನ ಸಂಭವಿಸಿತ್ತು.
Pakistana vannu Vishwa Bhoopatadinda kelave secundu galalli nasha maduva shakti Bharatakkide