ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಡಾನ್ನ ಗಣಿಯೊಂದರಲ್ಲಿ ಭೂಕುಸಿತ ಉಂಟಾಗಿದ್ದು, ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ.
ದಕ್ಷಿಣ ಸುಡಾನ್ನ ಪಶ್ಚಿಮ ಕೊರ್ಡೋಫಾನ್ ರಾಜ್ಯದ ಚಿನ್ನದ ಗಣಿಯಲ್ಲಿ ಭೂಕುಸಿತ ಸಂಭವಿಸಿದೆ.
ಉಮ್ ಡ್ರೈಸಾಯಾ ಗಣಿಯಲ್ಲಿ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದ ವೇಳೆ ಭೂಮಿ ಕುಸಿದಿದ್ದು, 38 ಮಂದಿ ಮೃತಪಟ್ಟಿದ್ದಾರೆ.
ಈ ಪ್ರದೇಶವು ಗಣಿಗಾರಿಕೆಗೆ ಸೂಕ್ತವಾಗಿಲ್ಲ ಎಂದು ಗಣಿಗಾರಿಕೆ ನಿಲ್ಲಿಸುವಂತೆ ಸರ್ಕಾರ ಸೂಚಿಸಿತ್ತು. ಅದಾಗ್ಯೂ ಅಕ್ರಮವಾಗಿ ನುಸುಳಿ ಗಣಿಗಾರಿಕೆ ಮಾಡಲಾಗುತ್ತಿತ್ತು ಎಂದು ಸರ್ಕಾರ ಆರೋಪಿಸಿದೆ. ಮೃತರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.