ಉತ್ತರಾಖಂಡದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.1ರಷ್ಟು ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ (ಡಿಸೆಂಬರ್ 19, 2022) ಮಧ್ಯರಾತ್ರಿ 1.50 ಕ್ಕೆ ಭೂಮಿ ಸ್ವಲ್ಪ ಕಂಪಿಸಿದ ಅನುಭವವಾಗಿ ಮಲಗಿದ್ದ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.1 ಆಗಿತ್ತು. ಉತ್ತರಕಾಶಿಯಿಂದ 24 ಕಿ.ಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದುವಿದೆ ಎಂಬ ಮಾಹಿತಿ ನೀಡಿದೆ. ಭೂಮಿಯ ಒಳಭಾಗದಲ್ಲಿ 5 ಕಿಲೋಮೀಟರ್ ಆಳದಲ್ಲಿ ಚಲನೆಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ನೇಪಾಳದಲ್ಲೂ ಭೂಕಂಪ ಸಂಭವಿಸಿದೆ. ಭಾನುವಾರ ರಾತ್ರಿ 10.53ಕ್ಕೆ ಧಾಡಿಂಗ್ ಜಿಲ್ಲೆಯಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ನೇಪಾಳ ಭೂಕಂಪದ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್ ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಕಾಟ್ಮಂಡುವಿನಿಂದ 50 ಕಿ.ಮೀ ದೂರದಲ್ಲಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!