ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋನೇಷ್ಯಾದ ಬಾಲಿ ಸಮುದ್ರದಲ್ಲಿ ಮಂಗಳವಾರ ಭಾರೀ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 7.0 ರಷ್ಟು ತೀವ್ರತೆ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ವರದಿ ಮಾಡಿದೆ.
ಇಂಡೋನೇಷ್ಯಾದಿಂದ ಉತ್ತರಕ್ಕೆ 201 ಕಿಲೋಮೀಟರ್ ದೂರದಲ್ಲಿ ಮತ್ತು ಭೂಮಿಯ ಮೇಲ್ಮೈಯಿಂದ 518 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಇದೆ ಎಂದು ಹೇಳಿದರು. ಸಮುದ್ರದ ಭೂಕಂಪದಿಂದ ಯಾವುದೇ ಸುನಾಮಿ ಬೆದರಿಕೆ ಇಲ್ಲ ಎಂದು ಯುಎಸ್ ಸುನಾಮಿ ಎಚ್ಚರಿಕೆ ವ್ಯವಸ್ಥೆ ಹೇಳಿದೆ.