ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ ನೇಪಾಳದಲ್ಲಿ 7.1 ತೀವ್ರತೆಯ ಭೂಕಂಪ ಸಂಭವಿಸಿದೆ, ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ಕೆಲವು ಭಾಗಗಳು ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ.
ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪವು ನೇಪಾಳ-ಟಿಬೆಟ್ ಗಡಿಯ ಬಳಿ ಲೊಬುಚೆಯಿಂದ ಈಶಾನ್ಯಕ್ಕೆ 93 ಕಿಮೀ ದೂರದಲ್ಲಿ ಬೆಳಿಗ್ಗೆ 6:35 ಕ್ಕೆ ಸಂಭವಿಸಿದೆ ಎನ್ನಲಾಗಿದೆ.
ಬಿಹಾರದಲ್ಲಿ ಕಂಪನದ ಅನುಭವವಾಗಿದ್ದು, ಜನರು ತಮ್ಮ ಮನೆಗಳು ಮತ್ತು ಅಪಾರ್ಟ್‌ಮೆಂಟ್‌ಗಳ ಹೊರಗೆ ಕಾಣಿಸಿಕೊಂಡಿದ್ದಾರೆ. ಭೂಕಂಪದ ನಂತರ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.