ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ : 3.9 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾನುವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಹೇಳಿದೆ.

ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಉತ್ತರದಲ್ಲಿ ಬೆಳಿಗ್ಗೆ 6:57 ಕ್ಕೆ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ಟ್ವೀಟ್‌ನಲ್ಲಿ ತಿಳಿಸಿದೆ. ಯಾವುದೇ ತಕ್ಷಣದ ಹಾನಿಯಾದ ವರದಿಗಳು ಲಭ್ಯವಿರುವುದಿಲ್ಲ.

ಅಫ್ಘಾನಿಸ್ತಾನ-ತಜಕಿಸ್ತಾನ್ ಪ್ರದೇಶದಲ್ಲಿ ಎರಡು ಭೂಕಂಪಗಳು ವರದಿಯಾದ ಕೆಲವೇ ದಿನಗಳಲ್ಲಿ ಜಮ್ಮು & ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದ ಕುರಿತು ಎನ್‌ಸಿಎಸ್‌ ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!