ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರ ಮುಂಜಾನೆ ಸಿಕ್ಕಿಂನ ಯುಕ್ಸೋಮ್ ಪಟ್ಟಣದಲ್ಲಿ ಭೂಕಂಪ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಯುಕ್ಸೋಮ್‌ನಿಂದ 70 ಕಿಮೀ ವಾಯುವ್ಯದಿಂದ 10 ಕಿಲೋಮೀಟರ್ ಆಳದಲ್ಲಿ ಬೆಳಿಗ್ಗೆ 4.15ರ ಸುಮಾರಿಗೆ ಭೂಕಂಪ ಸಂಭವಿಸಿದೆ.
ನಿನ್ನೆ (ಭಾನುವಾರ) ಅಸ್ಸಾಂನ ಕೇಂದ್ರ ಭಾಗದಲ್ಲಿ 4ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕೃತ ಬುಲೆಟಿನ್ ತಿಳಿಸಿದೆ. ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯ ಬಗ್ಗೆ ತಕ್ಷಣದ ವರದಿಯಾಗಿಲ್ಲ.
ಭೂಕಂಪವು ಸಂಜೆ 4:18 ಕ್ಕೆ ದಾಖಲಾಗಿದ್ದು, ಭೂಕಂಪನವು ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯಲ್ಲಿರುವ ನಾಗಾನ್ ಜಿಲ್ಲೆಯಲ್ಲಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ವರದಿಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.