ಜಮ್ಮು- ಕಾಶ್ಮೀರದಲ್ಲಿ ಮಧ್ಯಮ ತೀವ್ರತೆಯ ಭೂಕಂಪನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಸ್ಥಳವು ಕತ್ರಾದಿಂದ ಪೂರ್ವ ಆಗ್ನೇಯಕ್ಕೆ 74 ಕಿಲೋಮೀಟರ್ ದೂರದಲ್ಲಿತ್ತು. ಇದು ಬೆಳಿಗ್ಗೆ 9:15 ಕ್ಕೆ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ಟ್ವಿಟ್‌ ಮಾಡಿದೆ.
ಇದಕ್ಕೂ ಮೊದಲು, ಸೆಪ್ಟೆಂಬರ್ 8 ರಂದು, ಜಮ್ಮು ಮತ್ತು ಕಾಶ್ಮೀರದ ಕತ್ರಾದಿಂದ 62 ಕಿಮೀ ಪೂರ್ವ-ಈಶಾನ್ಯದಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!