ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ: ರಿಕ್ಟರ್‌ ಮಾಪಕದಲ್ಲಿ 4.0 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದೆ. ರಾಜ್ಯ ರಾಜಧಾನಿ ಇಂಫಾಲ್‌ನಿಂದ ಈಶಾನ್ಯಕ್ಕೆ 80 ಕಿಮೀ ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಸೂಚಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಬೆಳಿಗ್ಗೆ 6.14 ರ ಸುಮಾರಿಗೆ ಪಟ್ಟಣವನ್ನು ಅಪ್ಪಳಿಸಿದ ಭೂಕಂಪವು ನೆಲದಿಂದ 10 ಕಿಮೀ ಆಳದಲ್ಲಿ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ.

ಇದಕ್ಕೂ ಮುನ್ನ ಶುಕ್ರವಾರ ರಾತ್ರಿ ಪಶ್ಚಿಮ ಉತ್ತರ ಪ್ರದೇಶ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ 3.2 ತೀವ್ರತೆ ದಾಖಲಾಗಿತ್ತು. ಭೂಕಂಪವು ಈ ಪ್ರದೇಶದಲ್ಲಿ ರಾತ್ರಿ 9.31 ಕ್ಕೆ ಅಪ್ಪಳಿಸಿತು ಎಂದು ದೇಶದಲ್ಲಿ ಭೂಕಂಪದ ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ನೋಡಲ್ ಏಜೆನ್ಸಿ ತಿಳಿಸಿದೆ.

ಭೂಕಂಪಗಳ ಕುರಿತು ಎನ್‌ಸಿಎಸ್‌ನ ಇತ್ತೀಚಿನ ವರದಿಗಳ ಪ್ರಕಾರ, ಡಿಸೆಂಬರ್‌ನಲ್ಲಿ ಭಾರತದ ಭೂಪ್ರದೇಶದಲ್ಲಿ 38 ಭೂಕಂಪಗಳು ದಾಖಲಾಗಿವೆ. ಈ ಅವಧಿಯಲ್ಲಿ ಮಹಾರಾಷ್ಟ್ರ ಮತ್ತು ಹಿಮಾಚಲ ಪ್ರದೇಶದಲ್ಲಿ ತಲಾ 6 ಭೂಕಂಪಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!