ಫಿಜಿಯಲ್ಲಿ ನಡುಗಿದ ಭೂಮಿ: 6.3 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಫಿಜಿಯಲ್ಲಿ ಮಂಗಳವಾರದಂದು 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಫಿಜಿ ದಕ್ಷಿಣ ಪೆಸಿಫಿಕ್‌ನಲ್ಲಿರುವ ಒಂದು ದೇಶ. ಇದು 300 ಕ್ಕೂ ಹೆಚ್ಚು ದ್ವೀಪಗಳ ದ್ವೀಪಸಮೂಹವಾಗಿದೆ.

ಭೂಕಂಪವು 10:01:43 (UTC+05:30) ಸಮಯಕ್ಕೆ ಮತ್ತು 569 ಕಿಮೀ ಆಳದಲ್ಲಿ ಅಪ್ಪಳಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಈವರೆಗೆ ಯಾವುದೇ ಆಸ್ತಿ, ಪ್ರಾಣಹಾನಿ ಕುರಿತು ವರದಿಯಾಗಿಲ್ಲ.

ಒಂದು ವಾರದಲ್ಲಿ ಸಂಭವಿಸಿದ ಎರಡನೇ ಭೂಕಂಪವಿದಾಗಿದೆ. ಇದಕ್ಕೂ ಮುನ್ನ ಗುರುವಾರದಂದು ಫಿಜಿಯಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ಮಾಹಿತಿ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!