ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರ ರಾತ್ರಿ ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಅಟ್ಲಾಂಟಿಕ್ ಸಾಗರದಲ್ಲಿ ಭೂಕಂಪನವು ರಿಕ್ಟರ್ ಮಾಪಕದಲ್ಲಿ 6.4 ರಷ್ಟಿತ್ತು ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.
ಸಾಗರದ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.
ಸೋಮವಾರ ರಾತ್ರಿ 8:28ಕ್ಕೆ ಭೂಕಂಪ ಸಂಭವಿಸಿರುವುದಾಗಿ ಜಿಯೋಲಾಜಿಕಲ್ ಸರ್ವೆ ಟ್ವೀಟ್ ಮಾಡಿದೆ. ಭೂಕಂಪವು ಸಂಸ್ಥೆಯು ಯಾವುದೇ ಸುನಾಮಿ ಎಚ್ಚರಿಕೆಯನ್ನು ನೀಡಿಲ್ಲ. ಸುನಾಮಿ ಭೀತಿ ಇಲ್ಲ ಎಂದು ವಿಜ್ಞಾನಿಗಳು ಘೋಷಿಸಿದ್ದರಿಂದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.