ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪಗಳಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಕುರಿತು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ. NCS ಪ್ರಕಾರ, ಭೂಕಂಪವು ಭಾರತೀಯ ಕಾಲಮಾನ ಬೆಳಗ್ಗೆ 6.11 ಕ್ಕೆ ಸಂಭವಿಸಿದೆ.
ಭೂಕಂಪದ ತೀವ್ರತೆ 7.2ರಷ್ಟಿದ್ದು, 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಆಸ್ತಿ-ಪಾಸ್ತಿ ಹಾನಿಯಾಘಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ…..