ಜಮ್ಮು-ಕಾಶ್ಮೀರದಲ್ಲಿ ಭೂಕಂಪ:10 ದಿನಗಳ ಅಂತರದಲ್ಲಿ ಮೂರನೇ ಬಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಭೂಕಂಪಗಳು ಸಂಭವಿಸುತ್ತಿವೆ. ಭಾನುವಾರ ರಾತ್ರಿ 11.15ಕ್ಕೆ ಕಿಷ್ತ್‌ವಾರ್‌ನಲ್ಲಿ ಭೂಮಿ ಕಂಪಿಸಿದೆ.  ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.6ದಾಖಲಾಗಿದೆ. ಭೂಮಿಯ ಒಳಭಾಗದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರಬಿಂದು ದಾಖಲಾಗಿದೆ.

ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಪ್ರಾಣಹಾನಿ ಆಗದ ಕಾರಣ ಅಲ್ಲಿನ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ 10 ದಿನಗಳಲ್ಲಿ ಇದು ಮೂರನೇ ಭೂಕಂಪವಾಗಿದೆ. ಜನವರಿ 1 ರಂದು ದೆಹಲಿಯಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ.

ಇದರ ಪರಿಣಾಮವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಭೂಕಂಪ ಸಂಭವಿಸಿದೆ. ಮೇಲಾಗಿ ಈ ತಿಂಗಳ 5ರಂದು ಅಫ್ಘಾನಿಸ್ತಾನದಲ್ಲಿ ಶೇ.5.9ರಷ್ಟು ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಕಾರಣದಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಾಗೂ ದೆಹಲಿಯಲ್ಲಿ ಭೂಕಂಪ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!