ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ವಿಜಯಪುರ:
ನಗರದ ಕೆಲ ಬಡಾವಣೆ ಸೇರಿದಂತೆ ಜಿಲ್ಲೆಯ ಕೆಲವಡೆ ಸಾರ್ವಜನಿಕರಿಗೆ ಶನಿವಾರ ಮತ್ತೆ ಭೂಕಂಪನದ ಅನುಭವವಾಗಿದೆ.
ಇಂದು ಬೆಳಗ್ಗೆ 8.18 ರ ವೇಳೆ ಕೀರ್ತಿ ನಗರ, ಜಲನಗರ ಬಡಾವಣೆ ಪ್ರದೇಶ ಸೇರಿದಂತೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕು ವ್ಯಾಪ್ತಿ ಸೇರಿದಂತೆ ಹಲವು ಕಡೆ ಭೂಕಂಪನದ ಅನುಭವವಾಗಿದೆ.
ಅಲ್ಲದೆ ಕಳೆದ ನಾಲ್ಕೈದು ದಿನಗಳ ಹಿಂದೆ ಜಿಲ್ಲೆಯ ವಿವಿಧ ಭಾಗಗಳಲ್ಲಿ 3.9 ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಸದ್ಯ ಮತ್ತೆ ಎರಡನೇ ಬಾರಿಗೆ ಭೂಮಿ ನಡುಗಿದೆ ಎಂದು ಹೇಳಲಾಗುತ್ತಿದ್ದು, ಇದರಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ.