spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂಡೊನೇಷ್ಯಾದ ಬಾಲಿ ದ್ವೀಪದಲ್ಲಿ ಭೂಕಂಪನ: 3 ಸಾವು, 7 ಜನರಿಗೆ ಗಾಯ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂಡೊನೇಷ್ಯಾದ ಬಾಲಿ ದ್ವೀಪದಲ್ಲಿ ಶನಿವಾರ ಮುಂಜಾನೆ 2 ಸರಣಿ ಭೂಕಂಪನ ಸಂಭವಿಸಿದೆ. ಇದರ ಪರಿಣಾಮ ಮೂವರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ದ್ವೀಪದ ಶೋಧ ಮತ್ತು ರಕ್ಷಣಾ ಸಂಸ್ಥೆಯ ಮುಖ್ಯಸ್ಥ ಗೆಡೆ ದರ್ಮದಾ, ಭೂಕಂಪನ ಸಂಭವಿಸಿದ ಪರಿಣಾಮ ಗುಡ್ಡ ಪ್ರದೇಶದ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದ ಮೂವರು ಮೃತಪಟ್ಟಿದ್ದು,  ಹಲವರಿಗೆ ಮೂಳೆ ಮುರಿತ, ತಲೆಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಭೂಕುಸಿತದಿಂದ ಮೂರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಮೊದಲ ಭೂಕಂಪ 4.8 ತೀವ್ರತೆಯಲ್ಲಿ ಸಂಭವಿಸಿದ್ದು, ಬಾಲಿ ಬಂದರು ಪಟ್ಟಣ ಸಿಂಗರಾಜದಿಂದ ಈಶಾನ್ಯಕ್ಕೆ 62 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿತ್ತು. ಮತ್ತೊಂದರಲ್ಲಿ 4.3 ತೀವ್ರತೆ ದಾಖಲಾಗಿದೆ. 282 ಕಿ.ಮೀ. ಆಳದಲ್ಲಿ ಕೇಂದ್ರೀಕೃತವಾಗಿತ್ತು ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss