April 26, 2026
Sunday, April 26, 2026
spot_img

ದೆಹಲಿ-ಎನ್‌ಸಿಆರ್, ಉತ್ತರ ಭಾರತದ ವಿವಿಧೆಡೆ ಭೂ ಕಂಪನ: 5.9 ರಷ್ಟು ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ವಿವಿಧೆಡೆ ಭೂ ಕಂಪನದ ಅನುಭವವಾಗಿದೆ.

ದೆಹಲಿ-ಎನ್‌ಸಿಆರ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಜನರು ಆತಂಕದಿಂದ ಮನೆ ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪದ 5.9 ರಷ್ಟು ತೀವ್ರತೆಯು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದ್ದು, ಅಫ್ಘಾನಿಸ್ತಾನದ ಫೈಜಾಬಾದ್‌ನಿಂದ ಆಗ್ನೇಯಕ್ಕೆ ಸುಮಾರು 79 ಕಿಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಗೋಚರಿಸಿದ್ದು, ಇದರ ಪರಿಣಾಮ ದೆಹಲಿ ಸಹಿತ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಭೂಮಿ ನಡುಗಿದ್ದು, ಜನರು ಭಯಭೀತರಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !