ಸುಲಲಿತ ವ್ಯವಹಾರಗಳ ಶ್ರೇಯಾಂಕ: ಕರ್ನಾಟಕಕ್ಕೆ ಅಗ್ರ ಸ್ಥಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುಲಲಿತ ವ್ಯವಹಾರ (ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌) ಕ್ಕೆ ಸಂಬಂಧಿಸಿದಂತೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.
2020ರ ವಹಿವಾಟು ಸುಧಾರಣೆ ಕ್ರಿಯಾ ಯೋಜನೆಯಲ್ಲಿ (ಎಸ್‌ಬಿಆರ್‌ಎಪಿ) ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಾರ್ಷಿಕ ಸುಧಾರಣಾ ಕ್ರಮಗಳ ಪರಿಶೀಲನಾ ವರದಿ ಇಂದು ಬಿಡುಗಡೆಯಾಗಿದೆ.
2019 ರಲ್ಲಿ 17ನೇ ಸ್ಥಾನಕ್ಕೆ ಕುಸಿದಿದ್ದ ಕರ್ನಾಟಕ, ಹಲವು ಸುಧಾರಣಾ ಕ್ರಮಗಳ ಅನುಷ್ಠಾನದ ಜತೆಗೆ, ರಾಜ್ಯದ 30ಕ್ಕೂ ಹೆಚ್ಚು ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಪೂರಕ ಪ್ರಯತ್ನಗಳಿಂದ ಪ್ರಸಕ್ತ ಸಾಲಿನಲ್ಲಿ ಏರಿಕೆ ಕಂಡಿದೆ.
ಈ ಪಟ್ಟಿಯಲ್ಲಿ ಆಂಧ್ರ ಪ್ರದೇಶ, ಗುಜರಾತ್‌, ಹರಿಯಾಣ, ಪಂಜಾಬ್‌, ತಮಿಳುನಾಡು, ತೆಲಂಗಾಣ ಸ್ಥಾನ ಪಡೆದುಕೊಂಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!