ಕೇರಳಕ್ಕೆ ಅವಧಿಗೂ ಪೂರ್ವ ನೈಋತ್ಯ ಮಾನ್ಸೂನ್ ಎಂಟ್ರಿ: ಹವಾಮಾನ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇರಳಕ್ಕೆ ಅವಧಿ ಪೂರ್ವ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.
ಮೇ 27 ರ ವೇಳೆಗೆ ಕೇರಳಕ್ಕೆ ಸಾಮಾನ್ಯ ಆರಂಭದ ದಿನಾಂಕಕ್ಕಿಂತ ಮುಂಚಿತವಾಗಿ ಮೊದಲ ಮಳೆಯನ್ನು ತರುವ ಸಾಧ್ಯತೆಯಿದೆ . ಸಾಮಾನ್ಯ ಆರಂಭದ ದಿನಾಂಕ ಜೂನ್ 1 ಆಗಿದೆ. ಆದರೆ ಈ ವರ್ಷ ಕೇರಳದ ಮೇಲೆ ನೈಋತ್ಯ ಮಾನ್ಸೂನ್, ಸಾಮಾನ್ಯ ಆರಂಭದ ದಿನಾಂಕಕ್ಕಿಂತ 4 ದಿನ ಮುಂಚೆಯೇ ಬರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹೇಳಿದೆ.
ಮೇ 15 ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇವಾಖೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!