ಹೊಸ ದಿಗಂತ ಡಿಜಿಟಲ್ ಡೆಸ್ಕ್
ಭಾರತ ಪಾಕಿಸ್ಥಾನದ ನಡುವೆ ಶನಿವಾರ ನಡೆದ ವಿಶ್ವಕಪ್ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಏಳು ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ.
50 ಓವರ್ಗಳಲ್ಲಿ ಪಾಕಿಸ್ಥಾನ ಕೇವಲ 191 ರನ್ ಗಳಿಸುವಲ್ಲಿ ಮಾತ್ರ ಶಕ್ತವಾಯಿತು.
ಭಾರತದ ಪರ ನಾಯಕ ರೋಹಿತ್ ಶರ್ಮ 63 ಎಸೆತಗಳಲ್ಲಿ 86 ರನ್ ಗಳಿಸಿ ಭಾರತದ ಗೆಲುವನ್ನು ಸುಲಭವಾಗಿಸಿದರು. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ 53 ರನ್ ಗಳಿಸಿ ತಂಡ ಗೆಲುವಿಗೆ ಕಾಣಿಕೆ ನೀಡಿದರು.
ಭಾರತದ ಪರ ಬೌಲಿಂಗ್ನಲ್ಲಿ ಜಸ್ಪಿತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ತಲಾ 2 ವಿಕೆಟ್ ಗಳಿಸಿದರು. ಈ ಪಂದ್ಯ ಗೆಲುವಿನ ಮೂಲಕ ಭಾರತ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೆ ಏರಿದೆ.