HEALTH| ಮೊಳಕೆ ಮೆಂತ್ಯೆ ಸೇವಿಸಿ..ಆರೋಗ್ಯ ಬಲಪಡಿಸಿಕೊಳ್ಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೆಂತ್ಯ ಹಲವು ಔಷಧೀಯ ಗುಣಗಳ ಖಜಾನೆ. ಅದರಲ್ಲಿಯೂ ಮೊಳಕೆಯೊಡೆದ ಮೆಂತ್ಯ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟ ಲಾಭಗಳಿವೆ. ಮೆಂತ್ಯದಲ್ಲಿ ಕಂಡುಬರುವ ಪ್ರೋಟೀನ್, ಫೈಬರ್, ಕಾರ್ಬೋಹೈಡ್ರೇಟ್, ವಿಟಮಿನ್ ಬಿ ಹಾಗೂ ವಿಟಮಿನ್ ಸಿ ಗಳಂತಹ ಹಲವು ಪೋಷಕಾಂಶಗಳು ನಮ್ಮ ದೇಹವನ್ನು ಅನೇಕ ಕಾಯಿಲೆಗಳಿಂದ ದೂರವಿರಿಸುತ್ತವೆ.

ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ದೂರಾಗುತ್ತವೆ. ಮೆಂತ್ಯವು ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಮೆಂತ್ಯದಲ್ಲಿ ಫೈಬರ್ ಹೇರಳ ಪ್ರಮಾಣದಲ್ಲಿ ಕಂಡುಬರುತ್ತದೆ, ಇದು ಅಜೀರ್ಣ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಮಲಬದ್ಧತೆಯ ಸಮಸ್ಯೆ ಇದ್ದವರು, ಮೊಳಕೆಯೊಡೆದ ಮೆಂತ್ಯವನ್ನು ತಿನ್ನುವುದರಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

ಹೃದಯದ ಆರೋಗ್ಯಕ್ಕೆ ಉತ್ತಮ: ಮೊಳಕೆಯೊಡೆದ ಮೆಂತ್ಯ ಹೃದಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಮೊಳಕೆಯುಕ್ತ ಮೆಂತ್ಯ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದರಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತವೆ.

ಮಧುಮೇಹ ರೋಗಿಗಳ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸುತ್ತದೆ: ಮಧುಮೇಹ ಹೊಂದಿದವರಿಗೆ ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡಲು ಮೊಳಕೆ ಬರಿಸಿದ ಕಾಳುಗಳನ್ನು ಸೇವಿಸಲು ಸಲಹೆ ನೀಡಲಾಗುವುದು. ಮೊಳಕೆ ಭರಿಸಿದ ಕಾಳುಗಳು ರಕ್ತದಲ್ಲಿ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುವುದು. ಅವುಗಳಲ್ಲಿ ಕಾರ್ಬೋಹೈಡ್ರೇಟ್ಸ್ ಕಡಿಮೆ ಪ್ರಮಾಣದಲ್ಲಿ ಇರುತ್ತವೆ. ಜೊತೆಗೆ ದೇಹದಲ್ಲಿ ಇನ್ಸುಲಿನ್ ಮಟ್ಟವನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುತ್ತದೆ ಎಂದು ಕೆಲವು ಅಧ್ಯಯನಗಳು ಸಹ ದೃಢ ಪಡಿಸಿವೆ.

ತೂಕ ಇಳಿಕೆಗೆ ಲಾಭಕಾರಿ: ಮೆಂತ್ಯ ದೇಹವನ್ನು ನಿರ್ವಿಷಗೊಳಿಸುವ ಕೆಲಸ ಮಾಡುತ್ತದೆ. ಮೊಳಕೆಯೊಡೆದ ಮೆಂತ್ಯವು ತೂಕವನ್ನು ಇಳಿಕೆ ಮಾಡಲು ಪ್ರಯೋಜನಕಾರಿಯಾಗಿದೆ. ಇವುಗಳಲ್ಲಿರುವ ಪೋಷಕಾಂಶಗಳು ಚಯಾಪಚಯವನ್ನು ಹೆಚ್ಚಿಸುತ್ತವೆ ಮತ್ತು ತೂಕವನ್ನು ಇಳಿಕೆ ಮಾಡುವಲ್ಲಿ ಸಹಾಯ ಮಾಡುತ್ತವೆ. ಮೊಳಕೆಯೊಡೆದ ಮೆಂತ್ಯಕಾಳುಗಳನ್ನು ಸೇವಿಸುವುದರಿಂದ ದೇಹದಲ್ಲಿ ಅನಾವಶ್ಯಕವಾಗಿ ಶೇಖರಣೆಯಾದ ಕೊಬ್ಬು ವೇಗವಾಗಿ ಕರಗುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ: ಮೆಂತ್ಯದಲ್ಲಿರುವ ಪೋಷಕಾಂಶಗಳು ದೇಹದ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!