ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲ್ಲಿ ಬಿದ್ದ ಆಹಾರವನ್ನು ಸೇವಿಸಿದ ನಂತರ ಒಬ್ಬರು ಅಸ್ವಸ್ಥರಾಗಿ, ಅನೇಕರಿಗೆ ವಾಂತಿ ಮತ್ತು ಭೇದಿ ಶುರುವಾಗಿರುವ ಘಟನೆ ಕಲಬುರಗಿ ಸೇಡಂ ಪಟ್ಟಣದ ವಾಸವದತ್ತ ಸಿಮೆಂಟ್ ಫ್ಯಾಕ್ಟರಿಯಲ್ಲಿ ನಡೆದಿದೆ.
ಕಾರ್ಮಿಕರ ಕ್ಯಾಂಟೀನ್ ಆಹಾರದಲ್ಲಿ ಹಲ್ಲಿ ಪತ್ತೆಯಾಗಿದೆ. ಕಾರ್ಮಿಕ ಶಿವಶರಣಯ್ಯ ಮುಧೋಳ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನೇಕ ಕಾರ್ಮಿಕರು ವಾಂತಿ ಮತ್ತು ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಮಿಕನಿಗೆ ಗ್ಲುಕೋಸ್ ನೀಡಿ ಆಸ್ಪತ್ರೆ ಸಿಬ್ಬಂದಿ ಮನೆಗೆ ಕಳುಹಿಸಿದ್ದಾರೆ. ಅಂದು ಮಧ್ಯಾಹ್ನ 150ಕ್ಕೂ ಹೆಚ್ಚು ಮಂದಿ ಕ್ಯಾಂಟೀನ್ ನಲ್ಲಿ ಊಟ ಮಾಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.