ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಫೆಬ್ರವರಿ 16 ರಂದು ತ್ರಿಪುರಾದಲ್ಲಿ (Tripura) ಚುನಾವಣೆ (Election) ನಡೆಯಲಿದ್ದರೆ, ಫೆಬ್ರವರಿ 27 ರಂದು ಮೇಘಾಲಯದಲ್ಲಿ (Meghalaya) ಹಾಗೂ ನಾಗಾಲ್ಯಾಂಡ್‌ನಲ್ಲಿ (Nagaland) ವಿಧಾನಸಭೆ ಚುನಾವಣೆ (Assembly Elections) ನಡೆಯಲಿದೆ. ಈಶಾನ್ಯದ (North Eastern) ಮೂರು ಸಹೋದರಿ ರಾಜ್ಯಗಳಲ್ಲೂ (States) ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದಾಗ್ಯೂ ಮೂರೂ ರಾಜ್ಯಗಳ ಮತ ಎಣಿಕೆ ಮಾರ್ಚ್‌ 2 ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!