ಒಂದು ಸಂಸತ್ ಮತ್ತು 5ವಿಧಾನಸಭಾ ಸ್ಥಾನಗಳ ಉಪಚುನಾವಣೆ: ವೇಳಾಪಟ್ಟಿ ಬಿಡುಗಡೆ ಮಾಡಿದ ಇಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಐದು ರಾಜ್ಯಗಳ ಐದು ವಿಧಾನಸಭಾ ಸ್ಥಾನಗಳು ಮತ್ತು ಒಂದು ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಶನಿವಾರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ನವೆಂಬರ್‌ 10ರಂದು ಅಧಿಸೂಚನೆ ಹೊರಬೀಳಲಿದ್ದು, ಡಿಸೆಂಬರ್ 5ರಂದು ಉಪಚುನಾವಣೆ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಒಡಿಶಾದ ಪದಂಪುರ, ರಾಜಸ್ಥಾನದ ಸರ್ದಾರ್‌ಶಹರ್, ಬಿಹಾರದ ಕುರ್ಹಾನಿ, ಛತ್ತೀಸ್‌ಗಢದ ಭಾನುಪ್ರತಾಪುರ್, ಯುಪಿಯ ರಾಂಪುರ ವಿಧಾನಸಭಾ ಕ್ಷೇತ್ರ ಮತ್ತು ಮೈನ್‌ಪುರಿ ಸಂಸತ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

Image

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಮುಲಾಯಂ ಸಿಂಗ್ ಯಾದವ್ ಅವರ ನಿಧನದ ನಂತರ ಮೈನ್‌ಪುರಿ (ಉತ್ತರ ಪ್ರದೇಶ) ಸಂಸದೀಯ ಸ್ಥಾನವು ತೆರವಾಗಿತ್ತು. ನವೆಂಬರ್ 10 ರಂದು ಅಧಿಸೂಚನೆ ಬಿಡುಗಡೆ ಮಾಡಲಾಗುವುದು, ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ನವೆಂಬರ್ 17 ಕೊನೆಯ ದಿನಾಂಕ, ನವೆಂಬರ್ 18 ನಾಮಪತ್ರಗಳ ಪರಿಶೀಲನೆ ಮತ್ತು ನವೆಂಬರ್ 21 ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!