Wednesday, June 7, 2023

Latest Posts

ಮತದಾನದ ಅರಿವು ಮೂಡಿಸಲು ಘೋಷವಾಕ್ಯ ಪ್ರಕಟಿಸಿದ ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕದ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ರಾಜ್ಯದಾದ್ಯಂತ ಮತದಾರರಲ್ಲಿ ಮತದಾನ ಮತ್ತು ಚುನಾವಣೆ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಘೋಷವಾಕ್ಯವನ್ನು ಬಿಡುಗಡೆ ಮಾಡಿದೆ.

‘Nothing Like Voting, 1 vote For Sure’ ಎನ್ನುವುದು ಈ ಭಾರಿಯ ಘೋಷವಾಕ್ಯವಾಗಿರುತ್ತದೆ.

ಈ ಘೋಷವಾಕ್ಯವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇನ್ನಿತರೆ ಕಚೇರಿಗಳ ಪತ್ರ ವ್ಯವಹಾರಗಳಲ್ಲಿ ಹಾಗೂ ಇಲಾಖೆಗಳ ಜಾಲತಾಣಗಳ ಮುಖಪುಟಗಳಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಸಂಬಂಧಿತ ಇಲಾಖೆಯ ಮುಖ್ಯಸ್ಥರುಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಿತ ಇಲಾಖೆಗೆ ಸೂಚಿಸಿದೆ.
ಆದಕಾರಣ ಎಲ್ಲಾ ಇಲಾಖೆಗಳಿಗೆ ಆಯೋಗದ ನಿರ್ದೇಶನ ಪಾಲಿಸುವಂತೆ ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!