ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ 163 ಪ್ರಾಜೆಕ್ಟ್ ಇಂಜಿನಿಯರ್, ಟೆಕ್ನಿಕಲ್ ಆಫೀಸರ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಡಿಪ್ಲೋಮಾ, ಬಿ.ಇ/ಬಿ.ಟೆಕ್ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,500/- ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 4,2023ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.