ಹೊಸದಿಗಂತ ಡಿಜಿಟಲ್ ಡೆಸ್ಕ್:
ಜುಲೈ 23ಕ್ಕೆ ಆರ್ಥಿಕ ಸಮೀಕ್ಷೆ, ಜುಲೈ 24ಕ್ಕೆ ಬಜೆಟ್ ಮಂಡನೆ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಜುಲೈ 22ರಂದು ಬಜೆಟ್ ಮಂಡನೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಫೈನಾನ್ಷಿಯಲ್ ಎಕ್ಸ್ಪ್ರೆಸ್ ಪತ್ರಿಕೆಯ ವರದಿ ಪ್ರಕಾರ ಜುಲೈ 24ರಂದು ಸಂಸತ್ತಿನಲ್ಲಿ ಪೂರ್ಣ ಪ್ರಮಾಣದ ಮುಂಗಡ ಪತ್ರ ಮಂಡನೆ ಆಗಬಹುದು ಎನ್ನಲಾಗಿದೆ.
ಈ ವರದಿ ಪ್ರಕಾರ ಜುಲೈ 22ಕ್ಕೆ ಬಜೆಟ್ ಅಧಿವೇಶನ ಆರಂಭವಾಗಬಹುದು. ಜುಲೈ 23ಕ್ಕೆ ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ಆಗಬಹುದು. ಜುಲೈ 24ಕ್ಕೆ ಯೂನಿಯನ್ ಬಜೆಟ್ ಅನ್ನು ಪ್ರಸ್ತುತಪಡಿಸಬಹುದು ಎನ್ನಲಾಗಿದೆ. ಶೀಘ್ರದಲ್ಲೇ ದಿನಾಂಕ ಪ್ರಕಟಿಸುವ ನಿರೀಕ್ಷೆ ಇದೆ.