Sunday, March 26, 2023

Latest Posts

ಆರ್ಥಿಕ ಹೊಡೆತಕ್ಕೆ ಸಿಲುಕಿದ ಪಾಕ್: ಆಸ್ಪತ್ರೆಗಳಲ್ಲಿ ಔಷಧ ಕೊರತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : 

ಪಾಕಿಸ್ತಾನದಲ್ಲಿ (Pakistan) ಆರ್ಥಿಕ ಬಿಕ್ಕಟ್ಟು (economic crisis) ಎಲ್ಲ ರೀತಿಯಲ್ಲೂ ಹೊಡೆತ ಬಿದ್ದಿದ್ದು, ಆರೋಗ್ಯ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರಿದೆ.

ಆಸ್ಪತ್ರೆಗಳಲ್ಲಿ ಔಷಧಗಳಿಗೂ ಕೊರತೆಯುಂಟಾಗಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಔಷಧ ಉತ್ಪಾದನೆ ಕುಂಠಿತವಾಗಿದೆ. ಇದರಿಂದ ರೋಗಿಗಳಿಗೆ ಆಸ್ಪತ್ರೆಯಲ್ಲಿ ಔಷಧ ಸಿಗುತ್ತಿಲ್ಲ. ಹಾಗೆಯೇ, ಔಷಧ ಹಾಗೂ ವೈದ್ಯಕೀಯ ಸಲಕರಣೆಗಳ ಪೂರೈಕೆಯಾಗದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ.

ಪರಿಸ್ಥಿತಿ ಹೀಗೆಯೇ ಮುಂದುವರಿದರೆ ರೋಗಿಗಳು ಆಸ್ಪತ್ರೆಯಲ್ಲಿಯೇ ಮೃತಪಡುವ ಸಾಧ್ಯತೆ ಹೆಚ್ಚಿದೆ. ಇದರಿಂದಾಗಿ ಪಾಕಿಸ್ತಾನದ ಜನರಲ್ಲಿ ಆತಂಕ ಮನೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!