ರಾಜ್ಯದ ಜನರಿಗೆ‌ ತಟ್ಟಲಿದ್ಯಾ ವಿದ್ಯುತ್‌ ದರ ಏರಿಕೆಯ ಬಿಸಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಜನತೆಗೆ ವಿದ್ಯುತ್‌ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ ಬೀಳುವಂತಾಗಿದೆ.
ವಿದ್ಯುತ್‌ ದರ ಏರಿಕೆ ಬಗ್ಗೆ ಎಸ್ಕಾಂ ಗಳಿಂದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಪ್ರತಿ ಯೂನಿಟ್‌ ಗೈ 1.5 ರೂ. ಏರಿಕೆಯಾಗುವ ಸಾಧ್ಯತೆ ಇದೆ.
ನಾಳೆಯಿಂದ 3 ದಿನ ದರ ಪರಿಷ್ಕರಣೆ ಪರಿಶೀಲನಾ ಕಾರ್ಯ ನಡೆಯಲಿದ್ದು, ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ದರ ಏರಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷವೂ ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಕೆಯಾಗಿತ್ತು. ಆದರೆ ಬೇಡಿಕೆ ಇಟ್ಟ 1.39ರೂ.ನಲ್ಲಿ ಕೇವಲ 30 ಪೈಸೆ ಏರಿಕೆ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!