ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಇಡಿ ದಾಳಿ, ಯುಬಿ ಸಿಟಿಯ ಕಿಂಗ್ ಫಿಶರ್ ಟವರ್ ಮೇಲೂ ರೇಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದ್ದು ಶೋಧ ನಡೆಯುತ್ತಿದೆ.

ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಸೈಟ್ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಸೇರಿದಂತೆ ಹಲವು ದೂರುಗಳು ದಾಖಲಾದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!